ಕೇಂದ್ರ ಸರ್ಕಾರದಿಂದ ಅಧಿಕಾರ ದುರ್ಬಳಕೆ – ಸಿ.ಎಂ

ಗದಗ: ಕೇಂದ್ರ ಸರ್ಕಾರದಿಂದ ಅಧಿಕಾರ ದುರ್ಬಳಕೆಯಾಗುತ್ತಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಹೇಳಿದರು. ಸಚಿವ ಡಿ.ಕೆ.ಶಿವಕುಮಾರ್ ಮೇಲಿನ ಇಡಿ ಮತ್ತು ಐಟಿ ದಾಳಿಯ ಪ್ರಕರಣ ಹಿನ್ನಲೆ, ನಾವು ಕಾನೂನು ರೀತಿಯಲ್ಲಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು. ಕೇಂದ್ರ ಸರ್ಕಾರ ಐಟಿ ಇಲಾಖೆಯನ್ನು ದುರ್ಬಳಕೆ ಮಡಿಕೊಳ್ಳುತ್ತಿದೆ, ಇದರ ವಿರುದ್ದ ಚುನಾವಣ ಆಯೋಗಕ್ಕೆ ದೂರು ಕೊಡಲಾಗುವುದು ಎಂದು ಹೇಳಿದರು.
ಯಡಿಯೂರಪ್ಪ ಮಾಡಿರುವ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಸಿ.ಎಂ.ಸಿದ್ದರಾಮಯ್ಯ, ಜೈಲಿಗೆ ಹೋಗಿ ಬಂದಿರುವ ಅವರಿಗೆ ಇನ್ನೊಬ್ಬರ
ಬಗ್ಗೆ ಪ್ರಶ್ನಿಸುವ ನೈತಿಕತೆಯಿಲ್ಲ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ