ತುಮಕೂರು, ಮಾ.22- ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಸುಮಾರು ಒಂದು ಲಕ್ಷ ರೂ. ಮೌಲ್ಯದ ಹುಲ್ಲಿನ ಬಣವೆ ಸುಟ್ಟು ಕರಕಲಾಗಿರುವ ಘಟನೆ ಕೊರಟಗೆರೆ ತಾಲೂಕಿನ ಬೆಟ್ಟಶಂಬೂನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಶಿವಣ್ಣ ಎಂಬ ರೈತರಿಗೆ ಸೇರಿದ ಹುಲ್ಲಿನ ಬಣವೆಗೆ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಬೆಂಕಿ ಧಗ ಧಗ ಉರಿಯುತ್ತಿದ್ದುದನ್ನು ಗಮನಿಸಿದ ಗ್ರಾಮಸ್ಥರು ನೀರು ಹಾಕಿ ನಂದಿಸಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ.
ಅಷ್ಟರೊಳಗೆ ಬಣವೆ ಸಂಪೂರ್ಣವಾಗಿ ಸುಟ್ಟು ಬೂದಿಯಾಗಿತ್ತು. ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ರೈತ ಶಿವಣ್ಣ ಕಂಗಾಲಾಗಿದ್ದಾರೆ.
ಈ ಸಂಬಂಧ ಕೊರಟಗೆರೆ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ