ಬೆಂಗಳೂರು ಮಾ 21: ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಇಂದು ಕರ್ನಾಟಕ ಲೋಕತಂತ್ರ ಸೇನಾನಿ ಆಕ್ಷನ್ ಕಮಿಟಿಯವರು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ‘ವಿಜಯ್ ದಿವಸ್’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 1975 ರಲ್ಲಿ ಶ್ರೀಮತಿ ಇಂದಿರಾಗಾಂಧಿಯವರಿಂದ ಘೋಷಿಸಲ್ಪಟ್ಟಿದ್ದ ತುರ್ತುಪರಿಸ್ಥಿತಿಯ ವಿರುದ್ಧ ಸಂಘ ಕಾರ್ಯಕರ್ತರು ಹೋರಾಡಿ ಅದನ್ನು ವಾಪಸ್ ಪಡೆಯುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಅಂದಿನ ಹೋರಾಟದಲ್ಲಿ ಭಾಗವಹಿಸಿದ್ದ ಕಾರ್ಯಕರ್ತರನ್ನು ಸ್ಮರಿಸಿದ ಅವರು, ತಮ್ಮ ಸ್ವಾರ್ಥಕ್ಕಾಗಿ ದೇಶವನ್ನು ಎಂತಹ ದುಸ್ಥಿತಿಗೆ ಬೇಕಾದರೂ ತಳ್ಳುವ ಮನೋಭಾವದ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮುಖಂಡರಾದ ಶ್ರೀ ಕಲ್ಲಡ್ಕ ಪ್ರಭಾಕರ್ ಮುಂತಾದವರು ಸಮಾರಂಭದಲ್ಲಿ ಭಾಗವಹಿಸಿದ್ದರು.