
ಬೆಂಗಳೂರು, ಮಾ.22-ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಅವರನ್ನು ರಾಜ್ಯ ಗಡಿ ಆಯೋಗದ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿವಿವಾದ ಕುರಿತು ರಾಜ್ಯ ಸರ್ಕಾರಕ್ಕೆ ಸಲಹೆಸೂಚನೆ ನೀಡಲು ಈ ಆಯೋಗವನ್ನು ಸರ್ಕಾರ ರಚನೆ ಮಾಡಿದೆ.
ನ್ಯಾಯಮೂರ್ತಿ ರಾಜೇಂದ್ರ ಬಾಬು ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ನ್ಯಾಯಮೂರ್ತಿ ಮಂಜುನಾಥ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.