ಛತ್ತೀಸ್‍ಗಢದಲ್ಲಿ ನಕ್ಸಲೀಯರ ವಿರುದ್ಧ ಕಾರ್ಯಾಚರಣೆ:

ರಾಯ್‍ಪುರ್, ಮಾ.22-ಛತ್ತೀಸ್‍ಗಢದಲ್ಲಿ ನಕ್ಸಲೀಯರ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಪೆÇಲೀಸರು, ಮಾವೋವಾದಿಗಳ ಕಾರ್ಯಸ್ಥಾನ ಎಂದೇ ಪರಿಗಣಿತವಾದ ಸುಕ್ಮಾ ಜಿಲ್ಲೆಯ ಎರಡು ಸ್ಥಳಗಳಲ್ಲಿ ದಾಳಿ ನಡೆಸಿ 15 ಬಂಡುಕೋರರನ್ನು ಸೆರೆ ಹಿಡಿದಿದ್ದಾರೆ. ಬಂಧಿತರಲ್ಲಿ ಇಬ್ಬರ ತಲೆಗೆ ಬಹುಮಾನ ಘೋಷಿಸಲಾಗಿತ್ತು.
ಸುಕ್ಮಾ ಅರಣ್ಯದಲ್ಲಿ ಬಾಂಬ್ ಸ್ಫೋಟದಲ್ಲಿ ಸಿಆರ್‍ಪಿಎಫ್‍ನ ಒಂಭತ್ತು ಯೋಧರನ್ನು ಮಾವೋವಾದಿಗಳು ಹತ್ಯೆ ಮಾಡಿದ ಎಂಟು ದಿನಗಳ ನಂತರ ನಡೆದ ಈ ಕಾರ್ಯಾಚರಣೆಯಲ್ಲಿ 15 ನಕ್ಸಲರನ್ನು ಬಂಧಿಸಿ, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವುದು ಮಹತ್ವದ ಬೆಳವಣಿಗೆಯಾಗಿದೆ. ಆದರೆ ಇವರು ಈ ಕೃತ್ಯದಲ್ಲಿ ಶಾಮೀಲಾಗಿಲ್ಲವಾದರೂ, ಬಂಡುಕೋರರ ಬಂಧನದಿಂದ ಮತ್ತಷ್ಟು ನಕ್ಸಲರು ಬಲೆಗೆ ಬೀಳುವ ನಿರೀಕ್ಷೆ ಇದೆ.
ಬೆಜ್ಜಿ ಅರಣ್ಯದಲ್ಲಿ ಇಬ್ಬರು ಮಹಿಳೆಯರೂ ಸೇರಿದಂತೆ 14 ನಕ್ಸಲರನ್ನು ಹಾಗೂ ಪುಷ್ಪಲ್ ಪ್ರದೇಶದಲ್ಲಿ ಮತ್ತೊಮ್ಮೆ ಮಾವೋವಾದಿಯನ್ನು ಬಂಧಿಸಲಾಗಿದೆ ಎಂದು ಉಪ ಪೆÇಲೀಸ್ ಮಹಾ ನಿರೀಕ್ಷಕ(ದಕ್ಷಿಣ ಬಸ್ತರ್ ವಲಯ) ಪಿ. ಸುಂದರ್‍ರಾಜ್ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ