ಗದಗ, ಮಾ.22-ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ರಚನೆಗೆ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಬಾಲೆಹೊಸೂರಿನ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ಹಿನ್ನೆಲೆಯಲ್ಲಿ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ ಭಾರೀ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಇಬ್ಬರು ಸಿಪಿಐ, ಇಬ್ಬರು ಪಿಎಸ್ಐ, ನಾಲ್ಕು, ಎಎಸ್ಐ, ನಾಲ್ಕು ಕೆಎಸ್ಆರ್ಪಿ, ಒಂದು ಡಿಎಆರ್ ತುಕಡಿ ನಿಯೋಜಿಸಲಾಗಿತ್ತು. ಪ್ರತಿಭಟನೆಗೆ ಅವಕಾಶವಿಲ್ಲ. ಮನವಿ ನೀಡಲು ಮಾತ್ರ ಅವಕಾಶ ನೀಡಲಾಗುವುದು ಎಂದು ಪೆÇಲೀಸ್ ಅಧಿಕಾರಿಗಳು ಪ್ರತಿಭಟನಾಕಾರರಿಗೆ ತಿಳಿಸಿದಾಗ ಮಾತಿನ ಚಕಮಕಿ ನಡೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಕಳಕ್ಕೆ ಹೋಗುವ ಮಾರ್ಗಮಧ್ಯೆ ಭಾರೀ ಬಂದೋಬಸ್ತ್ ಏರ್ಪಡಿಸಲಾಗಿದೆ.