ಬೆಂಗಳೂರು, ಮಾ.22- ಬಿಜೆಪಿವತಿಯಿಂದ ಬೆಂಗಳೂರು ದಕ್ಷಿಣ ವಿಭಾಗದ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳಿಗೆ ನಗರದ ಪ್ರಚಲಿತ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಪಿಎಸ್ ಕಾಲೇಜಿನಲ್ಲಿ ಹಮಿಕೊಳ್ಳಲಾಗಿದ್ದ ಜಾಗೃತಿ ಶಿಬಿರದಲ್ಲಿ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸಂಚಾರ ಸಮಸ್ಯೆ, ಗುಂಡಿ ಬಿದ್ದ ರಸ್ತೆಗಳು, ಕೆರೆಗಳ ಸಂರಕ್ಷಣೆ ಹೀಗೆ ಹಲವಾರು ಪ್ರಚಲಿತ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಲಾಯಿತು.
ಪ್ರಬಂಧ ಸ್ಪರ್ಧೆ, ಚರ್ಚೆ, ನಾಟಕಗಳ ಮೂಲಕ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಯಿತು. ಈ ವೇಳೆ ಗೆದ್ದ ವಿದ್ಯಾರ್ಥಿಗಳಿಗೆ ಶಾಸಕ ರವಿಸುಬ್ರಹ್ಮಣ್ಯ ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರವಿಸುಬ್ರಹ್ಮಣ, ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ನಗರದ ಪ್ರಚಲಿತ ಸಮಸ್ಯೆಗಳ ಕುರಿತು ಅರಿವು ಮೂಡಿಸಿದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲಾ ಕಾಲೇಜುಗಳಲ್ಲೂ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.