ಹಾಸನ, ಮಾ.22- ನಗರದ ಎಂಜಿ ರಸ್ತೆಯಲ್ಲಿರುವ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆಧ್ಯಾತ್ಮಿಕ ಚಿಂತಕರು ಶ್ರೀ ರವಿಶಂಕರ್ ಗುರೂಜಿ ಅವರ ಸಾರಥ್ಯದಲ್ಲಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮಾ.24ರಂದು ಬೆಳಗ್ಗೆ 8.30ಕ್ಕೆ ಕೃಷ್ಣ-ರುಕ್ಮಿಣಿ ಕಲ್ಯಾಣೋತ್ಸವ ಆಯೋಜಿಸಲಾಗಿದೆ.
ವಾತ್ಸಲ್ಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಏರ್ಪಡಿಸಿರುವ ಈ ಧಾರ್ಮಿಕ ಸಮಾರಂಭದಲ್ಲಿ ಸಾವಿರಾರು ಮಂದಿ ಧಾರ್ಮಿಕ ವಾದಿಗಳು ಭಾಗವಹಿಸಿ ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ.