ಬೆಂಗಳೂರು, ಮಾ.23- ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಯಾವುದೇ ಗೊಂದಲವಿಲ್ಲದೆ ಆರಂಭಗೊಂಡಿದ್ದು, ಸುಗಮವಾಗಿ ನಡೆದಿದೆ ಎಂದು ಸಚಿವ ತನ್ವೀರ್ಸೇಠ್ ಇಂದಿಲ್ಲಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಪ್ರಥಮ ಭಾಷೆ ಕನ್ನಡದ ಪರೀಕ್ಷೆಯನ್ನು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಬರೆದಿದ್ದಾರೆ. ಯಾವುದೇ ಗೊಂದಲವಾಗದಂತೆ ಎಲ್ಲ ರೀತಿಯಲ್ಲೂ ವ್ಯವಸ್ಥಿತ ಕ್ರಮ ಕೈಗೊಂಡಿದ್ದೇವೆ. ಇದು ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಮೂಡಿಸಿದೆ ಎಂದರು.
ಮುಂಚಿತವಾಗಿಯೇ ವೇಳಾಪಟ್ಟಿ ಪ್ರಕಟಿಸಿ ವಿದ್ಯಾರ್ಥಿಗಳಲ್ಲಿ ಭಯ, ಒತ್ತಡ ನಿವಾರಿಸಲಾಗಿದೆ. ವ್ಯವಸ್ಥಿತವಾಗಿ, ನಿಯಮ ಬದ್ಧವಾಗಿ ಪರೀಕ್ಷೆ ನಡೆದಿದೆ ಎಂದು ಸ್ಪಷ್ಟಪಡಿಸಿದರು.