ನಗರದ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿದ್ದ ಭಗತ್ ಸಿಂಗ್ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎನ್.ರಾಜು ಉದ್ಘಾಟನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಚಾಲಕರ ಒಕ್ಕೂಟದ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ, ಆದರ್ಶ ಆಟೋ ಮತ್ತು ಟ್ಯಾಕ್ಸಿ ಯೂನಿಯನ್ ಅಧ್ಯಕ್ಷ ಮಂಜುನಾಥ್, ಪೋಷಕ ಕಲಾವಿದರ ಸಂಘದ ಅಧ್ಯಕ್ಷ ಡಿಂಗ್ರಿ ನಾಗರಾಜ್ ಹಾಗೂ ಹಿರಿಯ ಕಲಾವಿದ ಬಿರಾದಾರ್ ಇನ್ನಿತರರು ಉಪಸ್ಥಿತರಿದ್ದರು.