ನವದೆಹಲಿ:ಮಾ-23: ಆರು ರಾಜ್ಯಗಳ ರಾಜ್ಯಸಭಾ ಚುನಾವಣೆಯ ಮತದಾನ ಆರಂಭವಾಗಿದ್ದು, ಒಟ್ಟು 25 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.
ಕರ್ನಾಟಕ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಾರ್ಖಂಡ್, ಛತ್ತೀಸ್ ಘಡ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 9 ಗಂಟೆಯಿಂದ ಮತದಾನ ಆರಂಭವಾಗಿದೆ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಆಯಾ ರಾಜ್ಯಗಳ ಜನಪ್ರತಿನಿಧಿಗಳು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಜನರಿಂದ ನೇರವಾಗಿ ಆಯ್ಕೆಯಾಗಿರುವ ಶಾಸಕರು ಈ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಿಹಾರ ಮತ್ತು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಳಲ್ಲಿ ಸೋತಿರುವ ಬಿಜೆಪಿಗೆ ಹಾಲಿ ರಾಜ್ಯಸಭೆಯ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ತನ್ನ ಸ್ಥಾನಗಳನ್ನು ಉಳಿಸಿಕೊಳ್ಳಲೇ ಬೇಕಾದ ಅನಿವಾರ್ಯತೆ.. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಕರ್ನಾಟಕ, ಜಾರ್ಖಂಡ್, ಛತ್ತೀಸ್ ಘಡ ಮತ್ತು ತೆಲಂಗಾಣ ಸೇರಿ ಒಟ್ಟು 7 ರಾಜ್ಯಗಳ 26 ಸ್ಥಾನಗಳಿಗೆ ಶುಕ್ರವಾರ ಮತದಾನ ನಡೆಯುತ್ತಿದೆ.
ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳಿಗೆ 5 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಬಿಜೆಪಿಯಿಂದ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್ ನಿಂದ ಎಲ್. ಹನುಮಂತಯ್ಯ, ನಾಸೀರ್ ಹುಸೇನ್ ಮತ್ತು ಜಿ.ಸಿ. ಚಂದ್ರಶೇಖರ್ ಸ್ಪರ್ಧಿಸುತ್ತಿದ್ದರೆ ಜೆಡಿಎಸ್ ನಿಂದ ಬಿ.ಎಂ. ಫಾರೂಕ್ ಕಣದಲ್ಲಿದ್ದಾರೆ. ಬಿಜೆಪಿ ಒಂದು ಮತ್ತು ಕಾಂಗ್ರೆಸ್ ಇಬ್ಬರು ಅಭ್ಯರ್ಥಿಗಳನ್ನು ಆರಾಮವಾಗಿ ರಾಜ್ಯಸಭೆಗೆ ಕಳುಹಿಸಬಹುದಾಗಿದ್ದು ನಾಲ್ಕನೇ ಸ್ಥಾನಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ಇದೆ.
Rajya Sabha Elections,25 Seats,voting