ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಯುವತಿಯೊಬ್ಬಳು ಆತ್ಮಹತ್ಯೆ:

ಕಲಬುರ್ಗಿ, ಮಾ.23- ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ವಾಡಿ ರೈಲ್ವೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸುಮಾರು 22 ವರ್ಷದ ಯುವತಿ ಇಂದು ಬೆಳಗ್ಗೆ ನಗರದ ಕೋರಂಟ ಹನುಮಾನ್ ದೇವಸ್ಥಾನದ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವತಿಯ ಹೆಸರು, ವಿಳಾಸ ತಿಳಿದು ಬಂದಿಲ್ಲ.
ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ವಾಡಿ ರೈಲ್ವೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ