ಬೆಂಗಳೂರು, ಮಾ.23- ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾಂಗ್ರೆಸ್ ನಾಯಕರ ಮೇಲೆ ರಾಜಕೀಯ ಪ್ರೇರಿತವಾಗಿ ದಾಳಿ ಮಾಡುತ್ತಿದ್ದಾರೆ ಎಂದು ಆರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.
ಆದಾಯ ತೆರಿಗೆ ದಾಳಿಯಲ್ಲಿ ತಪ್ಪಿದ್ದರೆ ಕೋರ್ಟ್ಗೆ ಹೋಗಿ ಸಾಬೀತುಪಡಿಸಲಿ ಎಂದು ನಿನ್ನೆ ಆದಾಯ ತೆರಿಗೆ ಇಲಾಖೆಯ ಪ್ರಧಾನ ಆಯುಕ್ತರು ಸವಾಲು ಹಾಕಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಕೋರ್ಟ್ಗೆ ಹೋಗುವ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಅದು ಆನಂತರದ ಮಾತು. ಆದರೆ, ಆದಾಯ ತೆರಿಗೆ ದಾಳಿಯಲ್ಲಿ ರಾಜಕೀಯ ದುರುದ್ದೇಶ ಇದೆ ಎಂಬುದು ನಮ್ಮ ಆರೋಪ. ಈವರೆಗೂ ಯಡಿಯೂರಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ್, ಆರ್.ಅಶೋಕ್ ಅವರ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕೆ ದಾಳಿ ಮಾಡಿಲ್ಲ ಎಂದು ಪ್ರಶ್ನಿಸಿದರು.
ಈ ಎಲ್ಲಾ ಬಿಜೆಪಿ ನಾಯಕರು ಅಕ್ರಮ ಮಾಡಿದ್ದಾರೆ ಎಂದು ನಾನು ಹೇಳಿಲ್ಲ. ಆದರೆ, ಭ್ರಷ್ಟಾಚಾರದಿಂದ ಹಣ ಮಾಡಿದ್ದಾರೆ ಎಂದು ಸಿಎಂ ಗಂಭೀರ ಆರೋಪ ಮಾಡಿದರು.