ಬೆಂಗಳೂರು, ಮಾ.23-ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅತಿ ಹೆಚ್ಚು ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹಾಗೂ ಶಾಸಕ ಸಿ.ಟಿ.ರವಿ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯಾಗಿರುವ ರಾಜೀವ್ ಚಂದ್ರಶೇಖರ್ ಅವರು ಇತರೆ ಅಭ್ಯರ್ಥಿಗಳಿಗಿಂತ ಅತಿ ಹೆಚ್ಚು ಮತ ಗಳಿಸಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.