ನವದೆಹಲಿ,ಮಾ.23- ಹಿರಿಯ ಸಂಶೋಧಕ, ಸಾಹಿತಿ ಡಾ.ಎಂ.ಎಂ.ಕಲಬುರಗಿ ಸೇರಿದಂತೆ ಇತರೆ ಚಿಂತಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡೆವಿಟ್ ಸಲ್ಲಿಸಲು ಸುಪ್ರೀಂಕೋರ್ಟ್ ಕರ್ನಾಟಕ, ಮಹಾರಾಷ್ಟ್ರ ಹಾಗೂ ಕೇರಳ ಸರ್ಕಾರಕ್ಕೆ ಸೂಚನೆ ನೀಡಿದೆ.
ಆಗಸ್ಟ್ 30, 2016ರಂದು ಕಲಬುರಗಿ ಅವರ ಕೊಲೆಯಾಗಿ ಎರಡು ವರ್ಷ ಕಳೆದರೂ ಆರೋಪಿಗಳನ್ನು ಇದುವರೆಗೂ ಬಂಧಿಸಲಾಗಿಲ್ಲ. ನಮಗೆ ನ್ಯಾಯ ನೀಡಬೇಕೆಂದು ಕಲಬುರಗಿ ಕುಟುಂಬದವರು ಸುಪ್ರೀಂಕೋರ್ಟ್ಗೆ ಮೊರೆ ಹೋಗಿದ್ದಾರೆ.
ಏತನ್ಮಧೆ ಎನ್ಐಎ ವಿಚಾರಣೆಗೆ ಕರ್ನಾಟಕ ಸರ್ಕಾರ ನಕಾರ ವ್ಯಕ್ತಪಡಿಸಿದೆ ಎಂದು ತಿಳಿದುಬಂದಿದೆ. ಈ ಪ್ರಕರಣ ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿತ್ತು. ಸಾಹಿತಿಗಳು, ಕಲಾವಿದರು, ಚಿಂತಕರು ಬೃಹತ್ ಪ್ರತಿಭಟನೆ ನಡೆಸಿ ಆರೋಪಿಗಳನ್ನು ಶೀಘ್ರ ಬಂಧಿಸಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದನ್ನು ಸ್ಮರಿಸಬಹುದು.