ಕನ್ನಡಿಗರ ಅಭಿವೃದ್ಧಿಗಾಗಿ ಎಲ್ಲಾ ಕನ್ನಡಪರ ಸಂಘಟನೆಗಳು ಒಂದೇ ವೇದಿಕೆಯಾಗಬೇಕು

 

ಬೆಂಗಳೂರು, ಮಾ.23-ಕರ್ನಾಟಕದಲ್ಲಿ ಕನ್ನಡಿಗರ ಅಭಿವೃದ್ಧಿಗಾಗಿ ಎಲ್ಲಾ ಕನ್ನಡಪರ ಸಂಘಟನೆಗಳು ಒಂದೇ ವೇದಿಕೆಯಾಗಬೇಕೆಂದು ಕನ್ನಡ ಒಕ್ಕೂಟ ಕರೆ ನೀಡಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷದ ಅವಶ್ಯಕತೆ ಇದೆ. ರಾಷ್ಟ್ರೀಯ ಪಕ್ಷದ ಹೆಸರಿನಲ್ಲಿ ತಮಿಳು, ತೆಲುಗು, ಮಲಯಾಳಂ ಭಾಷೆಗಳವರು ರಾಜ್ಯಕ್ಕೆ ಲಗ್ಗೆ ಇಟ್ಟಿದ್ದಾರೆ. ಈ ಕುರಿತು ರಾಷ್ಟ್ರೀಯ ಪಕ್ಷಗಳಿಗೆ ಪ್ರಾಮಾಣಿಕ ಚಿಂತನೆ ಇಲ್ಲ ಎಂದರು.

ಬೆಂಗಳೂರು ನಗರದ ಒಟ್ಟು 28 ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 5 ವಿಧಾನಸಭಾ ಕ್ಷೇತ್ರದಿಂದ ಕನ್ನಡ ಪರ ಸಂಘಟನೆ ಮುಖಂಡರು ಗೆಲುವು ಸಾಧಿಸಬೇಕು ಎಂದ ಅವರು, ಪ್ರಾದೇಶಿಕ ಪಕ್ಷದ ಚೈತನ್ಯದಿಂದ ಕೆಲಸ ನಿರ್ವಹಿಸಲು ಎಲ್ಲಾ ಸಂಘಟನೆಗಳು ಒಗ್ಗೂಡಬೇಕೆಂದು ಕರೆ ನೀಡಿದರು.

ಕರ್ನಾಟಕ ಪ್ರಜಾ ಸಂಯುಕ್ತರಂಗ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಒಂದಾಗಬೇಕು ಎಂದರು.

ರಾಷ್ಟ್ರೀಯ ಪಕ್ಷಗಳಿಂದ ಹೈದರಾಬಾದ್-ಕರ್ನಾಟಕ, ಉತ್ತರ ಕರ್ನಾಟಕ ಪ್ರದೇಶಗಳ ಅಭಿವೃದ್ಧಿ ಸಾಧ್ಯವಿಲ್ಲ ಎಂದ ಅವರು, ರಾಜ್ಯ ಅನೇಕ ಕನ್ನಡ ಪರ ಸಂಘಟನೆಗಳು ರಾಜ್ಯದ ಸಮಸ್ಯೆಗಳ ವಿರುದ್ಧ ಹೋರಾಟ ಮಾಡಲಾಗಿತ್ತು. ಕಾರಣ ಜನರು ಪ್ರಾದೇಶಿಕ ಪಕ್ಷಗಳನ್ನು ಬೆಂಬಲಿಸಬೇಕೆಂದು ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ