![priyank](http://kannada.vartamitra.com/wp-content/uploads/2018/03/priyank-573x381.jpg)
ಬೆಂಗಳೂರು, ಮಾ.23-ಜೆಡಿಎಸ್ ಅಭ್ಯರ್ಥಿಗೆ ಬೆಂಬಲಿಸುವ ಪ್ರಮೇಯವೇ ಇಲ್ಲ. ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸುವುದಿದ್ದರೆ ನಾವು ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿರಲಿಲ್ಲ ಎಂದು ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.
ಇಂದು ನಡೆದ ರಾಜ್ಯಸಭೆ ಚುನಾವಣೆ ನಂತರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಅಭ್ಯರ್ಥಿಗೆ ಬೆಂಬಲಿಸುವ ಅಗತ್ಯವಿಲ್ಲ ಎಂದು ಹೇಳಿದರು.
ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ವಿಷಯ. ಜೆಡಿಎಸ್ ಯಾವುದೇ ಮಾತುಕತೆ ನಡೆಸದೆ ತನ್ನ ಪಾಡಿಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಎಂದು ಹೇಳಿದರು.
ಕಾಂಗ್ರೆಸ್ನ ಮೂವರು ಅಭ್ಯರ್ಥಿಗಳು ಜಯಗಳಿಸುವುದು ನಿಶ್ಚಿತ ಎಂಬ ವಿಶ್ವಾಸ ಪ್ರಿಯಾಂಕ ಖರ್ಗೆ ವ್ಯಕ್ತಪಡಿಸಿದರು.