ಲಿಂಗಾಯಿತ-ವೀರಶೈವ ಧರ್ಮದ ವಿಷಯ: ಬಿ.ಎಸ್.ಯಡಿಯೂರಪ್ಪ, ಜಗದೀಶ್‍ಶೆಟ್ಟರ್ ದ್ವಂದ್ವ ನಿಲುವು: ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ

 

ಬೆಂಗಳೂರು, ಮಾ.23- ಲಿಂಗಾಯಿತ-ವೀರಶೈವ ಧರ್ಮದ ವಿಷಯವಾಗಿ ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್‍ಶೆಟ್ಟರ್ ಅವರು ದ್ವಂದ್ವ ನಿಲುವು ಅನುಸರಿಸುತ್ತಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಬಿಜೆಪಿಯಲ್ಲಿರುವ ಎಲ್ಲಾ ವೀರಶೈವ ಮತ್ತು ಲಿಂಗಾಯಿತ ನಾಯಕರು ಪ್ರತ್ಯೇಕ ಧರ್ಮಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ. ಈಗ ಅದೇ ಅಭಿಪ್ರಾಯ ಆಧರಿಸಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡು ಕೇಂದ್ರಕ್ಕೆ ಶಿಫಾರಸು ಮಾಡಿದೆ. ಆದರೆ, ರಾಜಕೀಯ ಕಾರಣಕ್ಕಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದು ಬಿಜೆಪಿ ನಾಯಕರ ದ್ವಂದ್ವ ನಿಲುವು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ. ಮುಂದಿನ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಬೇಕೆಂದು ಅವರು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ