2011ರ ಜನಗಣತಿಯ ದತ್ತಾಂಶವನ್ನು ಬಳಸಿ ತೆರಿಗೆಗಳ ವಿತರಣೆಯನ್ನು ನಿರ್ಧರಿಸಲು ಕೇಂದ್ರ ಶಿಫಾರಸು-ಸಿಎಂ ವಿರೋಧ

ಬೆಂಗಳೂರು: ಕೇಂದ್ರ ಸರ್ಕಾರ “1971 ರ ಜನಗಣತಿಗೆ ಬದಲಾಗಿ 2011 ಜನಗಣತಿಯ ದತ್ತಾಂಶವನ್ನು ಬಳಸಿ ತೆರಿಗೆಗಳ ವಿತರಣೆಯನ್ನು ನಿರ್ಧರಿಸಲು 15ನೇ ಹಣಕಾಸು ಆಯೋಗಕ್ಕೆ ಶಿಫಾರಸು ಮಾಡಿದೆ. ಇದು ದಕ್ಷಿಣ ರಾಜ್ಯಗಳ ಮೇಲೆ ಮತ್ತಷ್ಟು ಪರಿಣಾಮ ಬೀರಲಿದ್ದು, ಇದನ್ನುವಿರೋಧಿಸುವ ಅಗತ್ಯವಿದೆ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಇದಕ್ಕೆ ದಕ್ಷಿಣ ಭಾರತದ ಆರು ಮುಖ್ಯಮಂತ್ರಿಗಳ ಹೆಸರನ್ನು ಟ್ಯಾಗ್ ಮಾಡಿದ್ದಾರೆ. ಇವರೊಂದಿಗೆ ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಮತ್ತು ಕಾಂಗ್ರೆಸ್ ನಾಯಕ ಶಶಿ ತರೂರ್ ಅವರನ್ನೂ ಕೂಡ ಟ್ಯಾಗ್ ಮಾಡಿರುವುದು ಕುತೂಹಲ ಮೂಡಿಸಿದೆ..
ದೇಶದ ದಕ್ಷಿಣ ರಾಜ್ಯಗಳ ರಾಜಕಾರಣಿಗಳು ಒಮ್ಮತದ ಅಭಿಪ್ರಾಯ ಹೊಂದುವ ಅಗತ್ಯವಿದೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮತ್ತು ಪುದುಚೇರಿ ಮುಖ್ಯಮಂತ್ರಿಗಳೆಲ್ಲರೂ ಒಗ್ಗೂಡಿ ಪ್ರತಿಭಟಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಟ್ವೀಟ್ ಮಾಡಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿವಿಧ ರಾಜ್ಯಗಳಿಗೆ ಎಷ್ಟು ಹಣವನ್ನು ವಿನಿಯೋಗಿಸಬೇಕು ಎಂಬುದನ್ನು ನಿರ್ಧರಿಸಲು 15ನೇ ಹಣಕಾಸು ಆಯೋಗಕ್ಕೆ 2011 ಜನಗಣತಿಯನ್ನು ನರೇಂದ್ರ ಮೋದಿ ಸರ್ಕಾರ ಶಿಫಾರಸು ಮಾಡಿದೆ. ಆದರೆ ಇಲ್ಲಿಯವರೆಗೆ, ಇದನ್ನು 1971 ರ ಜನಗಣತಿಯ ಆಧಾರದ ಮೇಲೆ ಮಾಡಲಾಗುತ್ತಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ