ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸಿದ್ದೇನೆ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್

ಬೆಂಗಳೂರು, ಮಾ.23-ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್‍ಗೆ ಮತ ಚಲಾಯಿಸಿರುವುದಾಗಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ರಾಜ್ಯಸಭೆ ಚುನಾವಣೆಯಲ್ಲಿ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದೆ. ಆನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು, ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸಿರುವುದಾಗಿ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ