
ಬೆಂಗಳೂರು, ಮಾ.23- ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಹಕ್ಕನ್ನು ನಾವು ಚಲಾಯಿಸಿದ್ದೇವೆ. ಜೆಡಿಎಸ್ ಏಜೆಂಟರಿಗೆ ತೋರಿಸಿ ಮತ ಹಾಕಿದ್ದೇವೆ ಎಂದು ಶಾಸಕ ಜಮೀರ್ ಅಹಮ್ಮದ್ಖಾನ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ರಾಜೀನಾಮೆ ನೀಡುತ್ತಿದ್ದು, ನಾಡಿದ್ದು (ಮಾ.25) ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಇಂದು ನಡೆದ ಚುನಾವಣೆಯಲ್ಲಿ ನಾವುಗಳು ನಮ್ಮ ಹಕ್ಕನ್ನು ತಪ್ಪದೇ ಚಲಾಯಿಸಿದ್ದೇವೆ ಎಂದರು.