ಲಾರಿ ಡಿಕ್ಕಿ ಸ್ಥಳದಲ್ಲೇ ಮೃತ

ಬೆಂಗಳೂರು, ಮಾ.24- ರಸ್ತೆ ದಾಟುತ್ತಿದ್ದ ಪಾದಚಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಲಸೂರು ಗೇಟ್ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಮೃತ ವ್ಯಕ್ತಿಯ ಹೆಸರು, ವಿಳಾಸ ತಿಳಿದುಬಂದಿಲ್ಲ. ರಾತ್ರಿ 10.45ರ ಸಂದರ್ಭದಲ್ಲಿ ಎನ್‍ಆರ್ ರಸ್ತೆಯ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಈ ವ್ಯಕ್ತಿ ರಸ್ತೆ ದಾಟುತ್ತಿದ್ದಾಗ ಅಥಿ ವೇಗವಾಗಿ ಮುನ್ನುಗ್ಗಿದ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದ ಹಲಸೂರು ಗೇಟ್ ಸಂಚಾರಿ ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ‘

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ