ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತ:

ಮಂಡ್ಯ,ಮಾ.24- ಸಂಬಂಧಿಯೊಂದಿಗೆ ನಿಮಿಷಾಂಬ ದೇವಾಲಯಕ್ಕೆ ಬೈಕ್‍ನಲ್ಲಿ ಹೋಗುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಂಡ್ಯ ತಾಲ್ಲೂಕಿನ ಸಂಪಳ್ಳಿ ನಿವಾಸಿ ಸಚಿನ್(23) ಮೃತಪಟ್ಟ ಬೈಕ್ ಸವಾರನಾಗಿದ್ದು , ಹಿಂಬದಿ ಕುಳಿತಿದ್ದ ಸಂಬಂಧಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರಿಬ್ಬರು ನಿಮಿಷಾಂಬ ದೇವಾಲಯಕ್ಕೆ ಬೈಕ್‍ನಲ್ಲಿ ಹೋಗುತ್ತಿದ್ದಾಗ ಬೆಂಗಳೂರು-ಮೈಸೂರು ಹೆದ್ದಾರಿಯ ವಿಸಿಫಾರಂ ಬಳಿ ಅತಿವೇಗವಾಗಿ ಬಂದ ಅಪರಿಚಿತ ವಾಹನ ಇವರ ಬೈಕ್‍ಗೆ ಡಿಕ್ಕಿ ಹೊಡೆದು ವಾಹನ ನಿಲ್ಲಿಸದೆ ಪರಾರಿಯಾಗಿದೆ.
ಗ್ರಾಮಾಂತರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ