![BJPlogo](http://kannada.vartamitra.com/wp-content/uploads/2018/03/Bharatiya_Janata_Party-600x381.jpg)
ಕೋಲಾರ, ಮಾ.24-ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿ ಏ.3 ರಂದು ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ವರ್ತೂರು ಶ್ರೀಧರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಹಿಂದುಳಿದ ವರ್ಗಗಳನ್ನು ಒಟ್ಟುಗೂಡಿಸಿ ರಾಷ್ಟ್ರದ ಪ್ರಧಾನಿಗಳ ಧ್ಯೇಯೋದ್ದೇಶಗಳನ್ನು ತಿಳಿಸಿ ಮುಂಬರುವ ಚುನಾವಣೆಗೆ ದಿಕ್ಸೂಚಿಯಾಗಿ ಮಾಡಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದು ನಮ್ಮ ಗುರಿ ಎಂದು ಹೇಳಿದರು.
ಕೆ.ಎಸ್.ಈಶ್ವರಪ್ಪ, ಬಿ.ಜೆ.ಪುಟ್ಟಸ್ವಾಮಿ ಅವರ ನೇತೃತ್ವದಲ್ಲಿ ಸಮಾವೇಶ ನಡೆಸಲಾಗುವುದು. ರಾಜ್ಯದಲ್ಲಿ ಶೇ.34ರಷ್ಟು ಹಿಂದುಳಿದ ವರ್ಗದವರಿದ್ದಾರೆ. ಅವರನ್ನೆಲ್ಲ ಒಗ್ಗೂಡಿಸುವ ಕೆಲಸವಾಗಬೇಕಿದೆ ಎಂದರು.
ಸಮಾವೇಶಕ್ಕೆ ಸುಮಾರು ಐದು ಲಕ್ಷ ಮಂದಿ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಜಿಲ್ಲಾಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ ಮಾತನಾಡಿ, ಈಶ್ವರಪ್ಪ ಹಾಗೂ ಯಡಿಯೂರಪ್ಪ ರಾಮಲಕ್ಷ್ಮಣರಂತೆ ಕೆಲಸ ನಿರ್ವಹಿಸುವಂತೆ ರಾಷ್ಟ್ರೀಯ ಅಧ್ಯಕ್ಷರು ಹೇಳಿದ್ದಾರೆ. ಅದರಂತೆ ಅವರು ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಗೇರಿ ನಾರಾಯಣಸ್ವಾಮಿ, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಹೂವಳ್ಳಿ ಛಲಪತಿ, ನಾಚಳ್ಳಿ ವೆಂಕಟರೆಡ್ಡಿ ಉಪಸ್ಥಿತರಿದ್ದರು.