ಕಾಂಗ್ರೆಸ್ ನ ಓಡಿಸೋಣ ಬಿಜೆಪಿನ ಉಳಿಸೋಣ: ಕೇಂದ್ರ ಸಚಿವ ಪ್ರಕಾಶ ಜಾವಡೇಕರ್ ಕರೆ

ಕೊಪ್ಪಳ:ಮಾ-೨೪: ರಾಜ್ಯದಲ್ಲಿ ರೈತರು ಇಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರಿಗೆ ಸಹಾಯಮಾಡುವ ಸರ್ಕಾರವೆಂದರೆ ಅದು ಬಿಜೆಪಿ ಮಾತ್ರ. ಹಾಗಾಗಿ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಓಡಿಸಿ, ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
ಕೊಪ್ಪಳದಲ್ಲಿ ಬಿಜಿಪೆ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ  ಮಾತನಾಡಿದ ಅವರು, ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ನೀರಿಲ್ಲ. ಲಕ್ಷಗಟ್ಟಲೆ ಎಕರೆ ಭತ್ತ ನಾಶವಾಗುತ್ತಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದಾವಣಗೆರೆಯಲ್ಲಿ ಮೆಕ್ಕೆಜೋಳ, ಹಾಸನದಲ್ಲಿ ಅಲುಗಡ್ಡೆ ಬೆಳೆದ ರೈತರು ಇಂದು ಸಂಕಷ್ಟದಲ್ಲಿ ಇದ್ದಾರೆ. ರೈತರಿಗೆ ಸಹಾಯಮಾಡುವ ಸರ್ಕಾರ ಎಂದರೆ ಅದು ಬಿಜೆಪಿ ಸರ್ಕಾರ ಮಾತ್ರ ಎಂದರು.
ಫಸಲಯೋಜನೆಯಿಂದ ರೈತರಿಗೆ ಅನುಕೂಲವಾಗಿದೆ.ರೈತರು ಲಾಭದಾಯಕ ಬೆಳೆ ಬೆಳೆಯಲು ಸಂಪೂರ್ಣವಾಗಿ ಬಿಜೆಪಿ ಬೆಂಬಲ ನೀಡುತ್ತಿದೆ. ಬಿಜೆಪಿ ದೇಶದಲ್ಲಿ ಮುಷ್ಠಿದಾನ ಅಭಿಯಾನ ಆರಂಭಿಸಿದೆ ಪ್ರತಿಯೊಬ್ಬ ರೈತರ ಮನೆಗೆ ತೆರಳಿ ಅವರ ಮನೆಯಲ್ಲಿ ಆಹಾರ ಸೇವಿಸಿ ಅವರ ಕಷ್ಟಗಳ ಬಗ್ಗೆ ಚರ್ಚಿಸಲಾಗುತ್ತಿದೆ ಎಂದರು.
ಇನ್ನು ಬಿಜೆಪಿ ದೇಶದಲ್ಲಿ ಒಗ್ಗಟ್ಟನ್ನು ಹೆಚ್ಚಿಸುತ್ತಿದೆ. ಆದರೆ ಕಾಂಗ್ರೆಸ್ ಇಬ್ಭಾಗ ಮಾಡುತ್ತಿದೆ. ಇನ್ನು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಗೂಂಡಗಿರಿ ಸರಕಾರವಾಗಿದೆ. ರಾಜ್ಯದಲ್ಲಿ ಪೊಲೀಸರ ಮೇಲೆಯೇ ಹಲ್ಲೆಗಳಾಗುತ್ತಿದ್ದರೂ ಸರ್ಕಾರ ಗಮನ ಹರಿಸುತ್ತಿಲ್ಲ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದರು.
BJP,Koppala,prakash jawadekar

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ