ರಾಂಚಿ, ಮಾ.19-ಬಹುಕೋಟಿ ರೂ.ಗಳ ಮೇವು ಹಗರಣದ ನಾಲ್ಕನೇ ಪ್ರಕರಣದಲ್ಲಿ ಆರ್ಜೆಡಿ ನಾಯಕ ಮತ್ತು ಬಿಹಾರದ ಮಾಜಿ ಮುಖ್ಯಮಂತ್ತಿ ಲಾಲು ಪ್ರಸಾದ್ ಯಾದವ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಇಂದು 14 ವರ್ಷಗಳ ಜೈಲು ಶಿಕ್ಷೆ ಮತ್ತು 60 ಲಕ್ಷ ರೂ.ಗಳ ದಂಡ ವಿಧಿಸಿದೆ.
1990ರಲ್ಲಿ ದುಮ್ಕಾ ಖಜಾನೆಯಿಂದ 3.13 ಕೋಟಿ ರೂ.ಗಳನ್ನು ಅಕ್ರಮವಾಗಿ ಪಡೆದ ಆರೋಪದ ಸಂಬಂಧ ಇಂದು ಸಿಬಿಐ ನ್ಯಾಯಾಧೀಶ ಶಿವ್ ಪಾಲ್ ಸಿಂಗ್ ಶಿಕ್ಷೆ ಪ್ರಮಾಣ ಪ್ರಕಟಿಸಿದರು.
ಈ ಪ್ರಕರಣದಲ್ಲಿ ಈ ನ್ಯಾಯಾಲಯವು ಮಾ.19ರಂದು 69 ವರ್ಷದ ಲಾಲು ಸೇರಿದಂತೆ ಇತರ 18 ಜನರನ್ನು ದೋಷಿಗಳು ಎಂದು ಘೋಷಿಸಿತ್ತು. ಇದೇ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಮಿಶ್ರ ಮತ್ತು 12 ಜನರನ್ನು ಕೋರ್ಟ್ ಖುಲಾಸೆಗೊಳಿಸತ್ತು.
ಸಿಬಿಐ ನ್ಯಾಯಾಲಯದ ಜೈಲು ಶಿಕ್ಷೆ ತೀರ್ಪಿನ ವಿರುದ್ಧ ಮೇಲಿನ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಲಾಲು ಪರ ವಕೀಲ ಪ್ರಭಾತ್ ಕುಮಾರ್ ತಿಳಿಸಿದ್ದಾರೆ.