ಹಿಂದುಳಿದ ಜಾತಿಗಳ ಅಧಿಕಾರಿಗಳ ಸಂಘದ ವತಿಯಿಂದ ಐಎಎಸ್, ಐಪಿಎಸ್, ಐಎಫ್‍ಎಸ್ ಮತ್ತು ಇತರೆ ಸ್ಪರ್ಧಾತ್ಮಕ ಹುದ್ದೆಗಳ ನೇಮಕಾತಿಗಾಗಿ ಉಚಿತ ತರಬೇತಿ

ಬೆಂಗಳೂರು,ಮಾ.24- ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಅಧಿಕಾರಿಗಳ ಸಂಘದ ವತಿಯಿಂದ ಐಎಎಸ್, ಐಪಿಎಸ್, ಐಎಫ್‍ಎಸ್ ಮತ್ತು ಇತರೆ ಸ್ಪರ್ಧಾತ್ಮಕ ಹುದ್ದೆಗಳ ನೇಮಕಾತಿಗಾಗಿ ಹಿಂದುಳಿದ ಪ್ರವರ್ಗ ಐ ಮತ್ತು ಪ್ರವರ್ಗ ಐಐ (ಎ)ಗೆ ಸೇರಿದ ಅರ್ಹ ಹಿಂದುಳಿದ ಜಾತಿಗಳ ಅಭ್ಯರ್ಥಿಗಳಿಗೆ ಮಾತ್ರ ಪೂರ್ವಭಾವಿ ಪರೀಕ್ಷೆಗೆ ಉಚಿತ ತರಬೇತಿಯನ್ನು ನೀಡಲಾಗುವುದು.

ಕೇಂದ್ರ ಲೋಕಸೇವಾ ಆಯೋಗದಿಂದ 2018-19ನೇ ಸಾಲಿಗೆ ಸ್ಪರ್ಧಾತ್ಮಕ ಹುದ್ದೆಗಳ ನೇಮಕಾತಿಗಾಗಿ ಪೂರ್ವಭಾವಿ ಪರೀಕ್ಷೆಗೆ ಅರ್ಜಿಗಳನ್ನು ಕರೆಯಲಾಗಿದ್ದು, ಈ ಕೊಡಿಸಲಾಗುವುದು.

ಈ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಸ್ವವಿವರಗಳೊಂದಿಗೆ ಅಧ್ಯಕ್ಷರು, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಅಧಿಕಾರಿಗಳ ಸಂಘ(ರಿ) ಜಿಎಂಸಿ ಬ್ಯಾಂಕ್ ಸಂಕೀರ್ಣ, 2ನೇ ಮಹಡಿ, ಪಂಪ ಮಹಾಕವಿ ರಸ್ತೆ, ಚಾಮರಾಜ್‍ಪೇಟೆ, ಬೆಂಗಳೂರು-560018 ಇವರಿಗೆ ಏಪ್ರಿಲ್ 15ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ದೂ: 080-26616885 ಸಂಪರ್ಕಿಸಿ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ