ಮೈಸೂರಿಗೆ ಆಗಮಿಸಿದ ರಾಹುಲ್ ಗಾಂಧಿ: ನಾಡ ದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ

ಮೈಸೂರು:ಮಾ-24: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷ ಬಲವರ್ಧನೆಗೆ ಮುಂದಾಗಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೈಸೂರಿಗೆ ಆಗಮಿಸಿದ್ದಾರೆ.

ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿರುವ ರಾಹುಲ್ ಗಾಂಧಿ, ನಾಡ ದೇವತೆ ಚಾಮುಂಡೇಶ್ವರಿ ದರ್ಶನ ಪಡೆದರು. ಇದೇವೇಳೆ ಬೆಟ್ಟದಲ್ಲಿರುವ ಗಣಪತಿಗೂ ವಿಶೇಷ

ಜೆ 

ಸಲ್ಲಿಸಿದರು.

ಬರೋಬ್ಬರಿ ಏಳು ವರ್ಷದ ಬಳಿಕ ರಾಹುಲ್ ಗಾಂಧಿ ಮೈಸೂರಿಗೆ ಭೇಟಿ ನೀಡಿದ್ದಾರೆ. 2010ರ ಅಗಸ್ಟ್‌ನಲ್ಲಿ ರಾಹುಲ್ ಮೈಸೂರಿಗೆ ಭೇಟಿ ನೀಡಿದ್ದರು. ರಾಹುಲ್ ಗಾಂಧಿ ಭೇಟಿ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ಪೊಲೀಸರು ನಿರ್ಬಂಧಿಸಿದ್ದರು.

ರಾಹುಲ್ ಗಾಂಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ರಾಜ್ಯ ಉಸ್ತುವಾರಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಸಾಥ್ ನೀಡಿದರು. ಡೊಳ್ಳು, ವೀರಗಾಸೆ ಮೂಲಕ ರಾಹುಲ್ ಗಾಂಧಿಯವರನ್ನು ಕಲಾತಂಡಗಳು ಸ್ವಾಗತಿಸಿದವು.

Rahul gandhi,Mysore,Chamundeshwari temple

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ