ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ, ಕಿರಣ (21) ಸಾವನ್ನಪ್ಪಿದ ಎಂಬಿಬಿಎಸ್ ವಿದ್ಯಾರ್ಥಿ:

ದಾವಣಗೆರೆ, ಮಾ.24-ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಗ ಸ್ಥಳದಲ್ಲೇ ಸಾವನ್ನಪ್ಪಿದರೆ ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿ ನಡೆದಿದೆ.
ಕಿರಣ (21) ಸಾವನ್ನಪ್ಪಿದ ಎಂಬಿಬಿಎಸ್ ವಿದ್ಯಾರ್ಥಿ.
ತಂದೆ ತಿಪ್ಪೇಸ್ವಾಮಿ ಜೊತೆ ಸಿಲಿಂಡರ್ ತರಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಎದುರಿಗೆ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನೆಲಕ್ಕುರುಳಿ ಬಿದ್ದಿದ್ದು, ತಲೆಯ ಮೇಲೆ ಲಾರಿಯ ಚಕ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನು ತಂದೆ ತಿಪ್ಪೇಸ್ವಾಮಿ(52) ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಜಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಜಗಳೂರು ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ