ನವದೆಹಲಿ, ಮಾ.25-ದೇಶದಲ್ಲಿ ಇದೇ ಪ್ರಪ್ರಥಮ ಬಾರಿಗೆ ಉದ್ಯಾನನಗರಿ ಬೆಂಗಳೂರಿನಲ್ಲಿ ಮಾ.28 ರಂದು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಫಾರ್ ಆಲ್ (ಸರ್ವರಿಗೂ ಕೃತಕ ಬುದ್ಧಿಮತ್ತೆ) ಶೃಂಗಸಭೆ ನಡೆಯಲಿದೆ.
ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಮೈಕ್ರೋಸಾಫ್ಟ್ ಸಂಸ್ಥೆ ಈ ಶೃಂಗಸಭೆ ಆಯೋಜಿಸಿದೆ. ವಿವಿಧ ವಲಯಗಳಲ್ಲಿ ಕೃತಕ ಬುದ್ಧಿಮತ್ತೆಯನ್ನು ಪರಿಣಾಮಕಾರಿಯಾಗಿ ಬಳಸುವುದು ಮತ್ತು ಎಐನ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸುವುದು ಈ ಶೃಂಗಸಭೆಯ ಉದ್ದೇಶವಾಗಿದೆ.
ಆರೋಗ್ಯ ರಕ್ಷಣೆ, ಆಟೋ ಮೊಬೈಲ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಈ ಶೃಂಗಸಭೆಯಲ್ಲಿ ಪಾಲ್ಗೊಂಡು ಸಮಾಲೋಚನೆ ನಡೆಸುವರು.