ಚಿಲ್ಲರೆ ಅಂಗಡಿ ವ್ಯಾಪಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಚಿಕ್ಕಬಳ್ಳಾಪುರ,ಮಾ.25-ಚಿಲ್ಲರೆ ಅಂಗಡಿ ವ್ಯಾಪಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಜಡೆನಹಳ್ಳಿ ಗ್ರಾಮದ ನಿವಾಸಿ ನರಸಿಂಹಮೂರ್ತಿ(32) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.
ಈತ ರಾಷ್ಟ್ರೀಯ ಹೆದ್ದಾರಿ 7ರ ಸೇಟದಿನ್ನೆ ಬಳಿ ಚಿಲ್ಲರೆ ಹಣ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಈತ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ಸಂಬಂಧ ಮೃತನ ಪತ್ನಿ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ