ಮಂಡ್ಯ,ಮಾ.25- ತೀವ್ರ ಎದೆನೋವಿನಿಂದ ಬಳಲುತ್ತಿದ್ದ ವಿಚಾರಣಾಧೀನ ಕೈದಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ನಿವಾಸಿ ಕಿರಣ್(26) ಮೃತಪಟ್ಟ ವಿಚಾರಣಾಧೀನ ಕೈದಿ.
ಕಿರಣ್ 2016ರ ಹತ್ಯೆ ಪ್ರಕರಣದಲ್ಲಿ ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ. ಈತನಿಗೆ ಎದೆ ನೋವು ಕಾಣಿಸಿಕೊಂಡಿದ್ದು , ಸಿಬ್ಬಂದಿಗಳು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಮಂಡ್ಯ ಸೆಂಟ್ರಲ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನನ್ನ ಮಗ ಹೃದಯಾಘಾತದಿಂದ ಮೃತಪಟ್ಟಿಲ್ಲ ಎಂದು ಅನುಮಾನ ವ್ಯಕ್ತಪಡಿಸಿ ಮೃತನ ಕುಟುಂಬಸ್ಥರು ಸಾವಿನ ಬಗ್ಗೆ ತನಿಖೆ ನಡೆಸಿ ಎಂದು ಪೆÇಲೀಸರನ್ನು ಒತ್ತಾಯಿಸಿದ್ದಾರೆ.