ಎಚ್.ಸಿ.ಬಾಲಕೃಷ್ಣ ತವರು ಕ್ಷೇತ್ರ ಮಾಗಡಿಯಲ್ಲಿ ಜೆಡಿಎಸ್ ವಿಕಾಸ ಪರ್ವ ಯಾತ್ರೆ

ಬೆಂಗಳೂರು,ಮಾ.25-ಶಾಸಕನ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದು ಮೈಸೂರಿನಲ್ಲಿ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದರೆ ಅವರ ತವರು ಕ್ಷೇತ್ರ ಮಾಗಡಿ ಪಟ್ಟಣದಲ್ಲಿ ಜೆಡಿಎಸ್ ವಿಕಾಸ ಪರ್ವ ಯಾತ್ರೆಯನ್ನು ನಡೆಸಿತು.

ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾಗಡಿಯ ತಿರುಮಲ ಶ್ರೀ ರಂಗನಾಥ ಸ್ವಾಮಿ ದೇವಾಲಯ, ಶ್ರೀ ಸೋಮವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಯಾತ್ರೆಗೆ ಚಾಲನೆ ನೀಡಿದರು.
ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ.ಮಂಜು ಸೇರಿದಂತೆ ಪಕ್ಷದ ಹಲವು ಮುಖಂಡರು ಪಾಲ್ಗೊಂಡಿದ್ದರು.

ಮಾಗಡಿಯ ಗಣಪತಿ ದೇವಸ್ಥಾನದ ಬಳಿಯಿಂದ ವಿಕಾಸ ವಾಹಿನಿ ಮೂಲಕ ಮೆರವಣಿಗೆ ನಡೆಸಲಾಯಿತು. ಮಾಗಡಿಯಲ್ಲಿರುವ ಕೆಂಪೇಗೌಡ ಪ್ರತಿಮೆ ಹಾಗೂ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಕುಮಾರಸ್ವಾಮಿ ಹಾಗೂ ಮಂಜು ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ