
ಬುದ್ಗಾಮ್;ಮಾ-25: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಸಾವನ್ನಪ್ಪಿದ್ದಾನೆ.
ಬುದ್ಗಾಮ್ ಜಿಲ್ಲೆಯ ಅಜಿಜಾಲ್ ಎಂಬ ಗ್ರಾಮದಲ್ಲಿ ಭದ್ರತಾಪಡೆ ಎನ್’ಕೌಂಟರ್ ನಡೆಸಿದ್ದು, ಉಗ್ರನನ್ನು ಹತ್ಯೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್ ನಡೆಸಿದ್ದ ಸೇನಾ ಪಡೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿತ್ತು. ಇಬ್ಬರೂ ಉಗ್ರರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಉಗ್ರರಾಗಿದ್ದಾರೆಂದು ಹೇಳಲಾಗುತ್ತಿದೆ.