
ಬೆಂಗಳೂರು: ಕೇಂದ್ರ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್, ಮಾರ್ಚ್ 28(ಬುಧವಾರ) ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.ರಾಜ್ಯ ವಿಧಾನಸಭಾ ಚುನಾವಣೆ ಸಿದ್ದತೆ ಹಾಗೂ ದಿನಾಂಕ ನಿಗಧಿ ಕುರಿತು ಚರ್ಚೆ ನಡೆಸಲು ಆಯುಕ್ತರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ರಾಜ್ಯ ವಿಧಾನಸಭೆ ಚುನಾವಣೆ ಸಿದ್ದತೆ ಹಾಗೂ ದಿನಾಂಕ ನಿಗಧಿ ಕುರಿತು ರಾಜ್ಯ ಚುನಾವಣಾ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿರುವ ಓಂ ಪ್ರಕಾಶ್ ರಾವತ್, ಈ ವಾರಾಂತ್ಯಕ್ಕೆ ಚುನಾವಣಾ ದಿನಾಂಕ ಘೋಷಿಸುವ ಸಾಧ್ಯತೆ ಇದೆ.