ಭದ್ರತಾ ಪಡೆಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಹಿಳಾ ನಕ್ಸಲೀಯರ ಸಾವು:

ಭುವನೇಶ್ವರ್, ಮಾ.26- ಒಡಿಶಾದ ಕೋರಪಟ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಇಂದು ಮುಂಜಾನೆ ಭದ್ರತಾ ಪಡೆಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಹಿಳಾ ನಕ್ಸಲೀಯರು ಹತರಾಗಿದ್ದಾರೆ.
ಹತ ನಕ್ಸಲೀಯರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯದಲ್ಲಿ ತೊಡಗಿದ್ದ ಭದ್ರತಾ ಪಡೆಗಳ ಮೇಲೆ ನಕ್ಸಲರ ಗುಂಪು ಗುಂಡಿನ ದಾಳಿ ನಡೆಸಿತು. ಈ ಸಂದರ್ಭದಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ನಾಲ್ವರು ಮಹಿಳೆಯರು ಹತರಾಗಿದ್ದು , ಉಳಿದವರು ಪರಾರಿಯಾಗಿದ್ದಾರೆ. ಈ ಪ್ರದೇಶದಲ್ಲಿ ಅಡಗಿರುವ ನಕ್ಸಲೀಯರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ನೆಲಬಾಂಬ್ ಸ್ಫೋಟ , ಯೋಧರಿಗೆ ಗಾಯ: ಛತ್ತೀಸ್‍ಗಢದ ಸುಕ್ಮಾ ಜಿಲ್ಲೆಯ ಬಸ್ತರ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ನಡೆಸಿದ ದಾಳಿಯಲ್ಲಿ ಸಿಆರ್‍ಪಿಎಫ್‍ನ ಕೆಲ ಯೋಧರು ಗಾಯಗೊಂಡಿದ್ದಾರೆ. ನೆಲ ಬಾಂಬ್ ಸ್ಫೋಟಿಸಿ ವಿಧ್ವಂಸಕ ಕೃತ್ಯ ನಡೆಸಲು ನಕ್ಸಲರು ಯತ್ನಿಸಿದಾಗ ಈ ಘಟನೆ ನಡೆಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ