ಬೆಂಗಳೂರು, ಮಾ.26-ಮಹಿಳೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯ ಹೆಸರು, ವಿಳಾಸ ತಿಳಿದುಬಂದಿಲ್ಲ. ಸುಮಾರು 35 ರಿಂದ 40 ವರ್ಷದಂತೆ ಕಾಣುವ ಈ ಮಹಿಳೆ ಚೂಡಿದಾರ್ ಧರಿಸಿದ್ದಾರೆ.
ರಾತ್ರಿ ದುಷ್ಕರ್ಮಿಗಳು ಈ ಮಹಿಳೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಇಂದು ಮುಂಜಾನೆ ಈ ಮಾರ್ಗದಲ್ಲಿ ಹೋಗುತ್ತಿದ್ದವರು ಶವವನ್ನು ಕಂಡು ತಕ್ಷಣ ಬ್ಯಾಡರಹಳ್ಳಿ ಪೆÇಲೀಸರಿಗೆ ತಿಳಿಸಿದ್ದಾರೆ.
ಸ್ಥಳಕ್ಕಾಗಮಿಸಿದ ಪೆÇಲೀಸರು ಪರಿಶೀಲನೆ ನಡೆಸಿ ಶವವನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ಸಾಗಿಸಿ ಪ್ರಕರಣ ದಾಖಲಿಸಿಕೊಂಡು ಮಹಿಳೆಯ ವಾರಸುದಾರರ ಪತ್ತೆಗೆ ಹಾಗೂ ದುಷ್ಕರ್ಮಿಗಳಿಗಾಗಿ ಶೋಧ ಕೈಗೊಂಡಿದ್ದಾರೆ.