ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ:

ತುಮಕೂರು, ಮಾ.26- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ.
ಈ ಸಂದರ್ಭದಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಮತ್ತು ಬೆಂಬಲಿಗರು ಜಿಲ್ಲಾ ಬಿಜೆಪಿ ಅಧ್ಯಕ್ಷರ ಕಾರ್ಯ ವೈಖರಿ ಖಂಡಿಸಿ ಅಮಿತ್ ಷಾ ಅವರಿಗೆ ಮನವಿ ಪತ್ರ ಸಲ್ಲಿಸುವ ಮೂಲಕ ಜಿಲ್ಲಾ ಬಿಜೆಪಿ ಘಟಕದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದನ್ನು ಬಹಿರಂಗಪಡಿಸಿದ್ದಾರೆ.
ಕಳೆದ ಮೂರ್ನಾಲ್ಕು ವರ್ಷಗಳಿಂದ ತುಮಕೂರು ನಗರ ಹಾಗೂ ಜಿಲ್ಲೆಯಲ್ಲಿ ಬಿಜೆಪಿ ಪಕ್ಶಷದಲ್ಲಿ ಭಿನ್ನಮತ ತೀವ್ರಗೊಂಡಿತ್ತು. ಇತ್ತೀಚೆಗೆ ಬಿ.ಎಸ್.ಯಡಿಯೂರಪ್ಪ ಅವರು ಜಿಲ್ಲಾಧ್ಯಕ್ಷ ಜಿ.ಬಿ.ಜ್ಯೋತಿ ಗಣೇಶ್ ಅವರಿಗೆ ಈ ಬಾರಿ ಟಿಕೆಟ್ ಕೊಡುವುದಾಗಿ ಹೇಳಿದ್ದರು. ಈ ಸಂದರ್ಭದಲ್ಲೇ ಭಿನ್ನಮತ ಸ್ಫೋಟಗೊಂಡಿದ್ದು , ಇದೀಗ ಮತ್ತಷ್ಟು ತೀವ್ರವಾಗೊಂಡಿದೆ.
ಇಂದು ಸೊಗಡು ಶಿವಣ್ಣ ಹಾಗೂ ದಿಲೀಪ್ ನೇತೃತ್ವದಲ್ಲಿ ಸುಮಾರು ನೂರಕ್ಕೂ ಹೆಚ್ಚು ಮಂದಿ ಅಮಿತ್ ಷಾ ಅವರಿಗೆ ಮನವಿ ಸಲ್ಲಿಸಿ ಅನ್ಯ ಪಕ್ಷದಿಂದ ಬಿಜೆಪಿಗೆ ಬಂದು ಪಕ್ಷವನ್ನು ಒಡೆಯುತ್ತಿದ್ದಾರೆ. ಕೂಡಲೇ ಇವರನ್ನು ವಜಾಗೊಳಿಸಿ ಬಿಜೆಪಿಯಲ್ಲಿ ಉಳಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಪ್ರತಿಭಟನೆ ನಡೆಸಲು ಸಜ್ಜಾಗಿದ್ದವರಿಗೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ದಿವ್ಯಾ ಗೋಪಿನಾಥ್ ಅವರು ಮನವೊಲಿಸಿ ಪ್ರತಿಭಟನೆ ನಡೆಸದಂತೆ ಸೂಚಿಸಿದರು.
ಪಾಸ್ ವಿತರಣೆಯಲ್ಲಿ ತಾರತಮ್ಯ: ಸಿದ್ದಗಂಗಾ ಮಠಕ್ಕೆ ಅಮಿತ್ ಷಾ ಅವರು ಭೇಟಿ ನೀಡುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಅವರ ಬೆಂಬಲಿಗರು ಮಠಕ್ಕೆ ಆಗಮಿಸಿದ್ದರು. ಆದರೆ ಪಾಸ್ ನೀಡುವ ವಿಚಾರದಲ್ಲಿ ತಾರತಮ್ಯವಾಗಿದ್ದು, ಇದನ್ನು ಖಂಡಿಸಿ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಕೆಲ ಕಾಲ ಪೆÇಲೀಸರು ಮತ್ತು ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೆÇಲೀಸರು ಹರಸಾಹಸ ಪಟ್ಟರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ