
ಬೆಂಗಳೂರು: ಮಾ-27: ರಾಜ್ಯ ವಿಧಾನಸಭಾ ಚುನಾವಣೆ ಮುಹೂರ್ತ ಫಿಕ್ಸ್ ಆಗಿದ್ದು, ಮೇ 12ರಂದು ಚುನಾವಣೆ ನಡೆಯಲ್ಲಿದ್ದು, ಈ ಹಿನ್ನಲೆಯಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಚುನಾವಣಾ ನೀತಿ ಸಂಹಿತೆಯ ಬಿಸಿ ತಟ್ಟಿದ್ದು, ಅವರ ಬಹುತೇಕ ಕಾರ್ಯಕ್ರಮಗಳು ರದ್ದಾಗಿವೆ.
ಕೋಲಾರ–ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಕೋಚಿಮುಲ್) ನಂದಿ ಕ್ರಾಸ್ ಬಳಿ 160 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮೆಗಾ ಡೇರಿ ಉದ್ಘಾಟನೆಗೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಷ್ಟೇ ನೀಡಿ ಮರಳಿದ್ದಾರೆ.
ಇದೇ ಸಮಯದಲ್ಲಿ ಮುಖ್ಯಮಂತ್ರಿಗಳು ಸರ್ಕಾರಿ ಕಾರು ಬಳಸದೆ ಶಾಸಕ ಡಾ.ಕೆ.ಸುಧಾಕರ ಅವರ ಕಾರಿನಲ್ಲಿ ಮರಳಿದರು. ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿರುವ ಚಿಕ್ಕಬಳ್ಳಾಪುರದ ಕಣಜೇನಹಳ್ಳಿಯ ಜೆಡಿಎಸ್ ಮುಖಂಡ ಕೆವಿ ನಾಗರಾಜ್ ಅವರ ಮನೆಗೆ ಭೇಟಿ ಕಾರ್ಯಕ್ರಮವನ್ನು ಕೂಡ ಸಿಎಂ ರದ್ದು ಮಾಡಿದ್ದಾರೆ.