
ಮಂಗಳೂರು, ಮಾ.27-ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಲ್ಲೇರಿ ನಿವಾಸಿ ಚಂದ್ರಶೇಖರ್ ಮೃತ ಸವಾರ. ಇಂದು ಬೆಳಿಗ್ಗೆ ಚಂದ್ರಶೇಖರ್ ದ್ವಿಚಕ್ರವಾಹನದಲ್ಲಿ ತೆರಳುವಾಗ ಉಪ್ಪಿನಂಗಡಿ ಸಮೀಪ ಬಸ್ ಡಿಕ್ಕಿ ಹೊಡೆದ ಪರಿಣಾಮ ಆತ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಬಸ್ ಆತನ ಮೇಲೆ ಹರಿದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.