ಶಿವಮೊಗ್ಗ, ಮಾ.27- ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ ಎಂದು ಉಸ್ತುವಾರಿ ಮುರಳೀಧರರಾವ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಈಶ್ವರಪ್ಪ ಅವರು ಜತೆಯಾಗಿಯೇ ಇದ್ದಾರೆ. ಯಾವುದೇ ಅಪಸ್ವರಗಳು ಇಲ್ಲ ಎಂದು ತಿಳಿಸಿದರು.
ಇವರಿಬ್ಬರು ಅಣ್ಣ-ತಮ್ಮ ಇದ್ದಂತೆ, ಸಹೋದರರಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರುವುದು ಸಹಜ. ಅದನ್ನೆಲ್ಲಾ ಬದಿಗೊತ್ತಿ ಒಗ್ಗಟ್ಟಾಗಿ ವಿಧಾನಸಭೆ ಚುನಾವಣೆಯನ್ನು ಎದುರುಸುತ್ತೇವೆ ಎಂದು ಸ್ಪಷ್ಟಪಡಿಸಿದರು.