ನವದೆಹಲಿ: ಬಹು ನಿರೀಕ್ಷಿತ ಕರ್ನಾಟಕ ವಿಧಾಸಭೆ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಮೇ 12ಕ್ಕೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 15ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಇದಿನಿಂದಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ.
ದೆಹಲಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್, ಕರ್ನಾಟಕ ವಿಧಾನಸಭೆ ಚುನಾವಣಾ ದಿನಾಂಕ ಪ್ರಕಟಿಸಿದರು.
ಏ.17 ಅಧಿಸೂಚನೆ ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಏ.24 ಕೊನೆ ದಿನವಾಗಿದೆ.
ಏ.25ರಂದು ನಾಮಪತ್ರ ಪರಿಶೀಲನ ನಡೆಯಲಿದ್ದು, ಏ.27 ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ. ಮೇ 28ರ ಒಳಗೆ ಎಲ್ಲಾ ಚುನಾವಣಾ ಪ್ರಕ್ರಿಯೆ ಪೂರ್ಣವಾಗಲಿದೆ.