ಹೆಚ್.ಡಿ.ದೇವೇಗೌಡರಿಗೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿರುಗೇಟು

ಬೆಂಗಳೂರು:ಮಾ-27:  ಕಾಂಗ್ರೆಸ್ ಒಪ್ಪಿದರೆ ಹೊಂದಾಣಿಕೆಗೆ ಸಿದ್ಧ ಎಂಬ ರೀತಿಯಲ್ಲಿ ಹೇಳಿಕೆ ನೀಡಿದ್ದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿರುಗೇಟು ನೀಡಿದ್ದು,  ರಾಜ್ಯದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದ್ದು, ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾವು ಐದು ವರ್ಷ ಉತ್ತಮ ಆಡಳಿತ ನೀಡಿದ್ದೇವೆ. ಪೂರ್ಣ ಬಹುಮತದೊಂದಿಗೆ ಸ್ವತಂತ್ರವಾಗಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಸದ್ಯಕ್ಕೆ ಕಾಂಗ್ರೆಸ್ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯತೆ ಇಲ್ಲ ಎಂದರು.

ಹೆಚ್. ಡಿ ದೇವೇಗೌಡರು ಕಾಂಗ್ರೆಸ್ ಒಪ್ಪಿದರೆ ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ಆದರೆ ಇದು ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ನಿರ್ಧಾರವಾಗಲಿದೆ. ಹೊಂದಾಣಿಕೆಯ ಅಗತ್ಯತೆ ಇಲ್ಲ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದರು.

ಚುನಾವಣಾ ದಿನಾಂಕ ಘೋಷಣೆಯಾಗಿದೆ, ಚುನಾವಣೆಗೆ ಪಕ್ಷ ಎಲ್ಲಾ ರೀತಿಯಲ್ಲಿಯೂ ಸಿದ್ಧವಾಗಿದೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ.  ಅಭ್ಯರ್ಥಿಗಳ ಪಟ್ಟಿ ಅಂತಿಮವಾದ ಬಳಿಕ ಎಐಸಿಸಿ ಚುನಾವಣಾ ಸಮಿತಿ ಒಪ್ಪಿಗೆ ಪಡೆದು ಪಟ್ಟಿಯನ್ನು ಪ್ರಕಟಿಸುತ್ತೇವೆ. ಏಪ್ರಿಲ್15 ರೊಳಗೆ ಕಾಂಗ್ರೆಸ್ ಪಟ್ಟಿ ಪ್ರಕಟಗೊಳ್ಳಲಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ