ಎಲೆಕ್ಟ್ರಾನಿಕ್ ಮತಯಂತ್ರಗಳ ಬಗ್ಗೆ ಯಾವುದೇ ರೀತಿಯ ಅನುಮಾನ ಬೇಡ: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್

ಬೆಂಗಳೂರು, ಮಾ.27- ಎಲೆಕ್ಟ್ರಾನಿಕ್ ಮತಯಂತ್ರಗಳ ಬಗ್ಗೆ ಯಾವುದೇ ರೀತಿಯ ಅನುಮಾನ ಬೇಡ. ಮತದಾನ ಮಾಡುವ ಒಂದು ಗಂಟೆ ಮುನ್ನ ಎಲ್ಲ ರಾಜಕೀಯ ಪಕ್ಷಗಳ ಏಜೆಂಟರ ಸಮ್ಮುಖದಲ್ಲಿ ಅಣಕು ಮತದಾನ ಮಾಡಲಾಗುವುದು. ನಂತರ ಮತದಾನಕ್ಕೆ ಚಾಲನೆ ನೀಡಲಾಗುವುದು ಎಂದು ಬೆಂಗಳೂರು ನಗರ ಜಿಲ್ಲೆ ಚುನಾವಣಾಧಿಕಾರಿಯಾದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಇಂದಿಲ್ಲಿ ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ದಿನಾಂಕ ಪ್ರಕಟವಾಗಿದ್ದು, ಹಲವು ರಾಜಕೀಯ ಪಕ್ಷಗಳು, ಸಾರ್ವಜನಿಕ ವಲಯದಲ್ಲಿ ಇವಿಎಂಗಳ ಬಗ್ಗೆ ಇರುವ ಅನುಮಾನಗಳನ್ನು ಬಗೆಹರಿಸಲಾಗಿದೆ. ಸಾರ್ವಜನಿಕವಾಗಿ ಜಾಗೃತಿ ಮೂಡಿಸಲಾಗಿದೆ ಎಂದರು.

ಮತದಾನ ಪ್ರಾರಂಭಕ್ಕೂ ಮುನ್ನ ರಾಜಕೀಯ ಪಕ್ಷಗಳ ಏಜೆಂಟರುಗಳ ಮುಂದೆ ಅಣಕು ಮತದಾನದ ಮೂಲಕ ಸುಮಾರು 50 ಮತಗಳನ್ನು ಹಾಕಿ, ಮತಯಂತ್ರಗಳನ್ನು ದೃಢೀಕರಿಸಿಕೊಂಡು ನಂತರ ಚುನಾವಣೆಗೆ ಚಾಲನೆ ನೀಡಲಾಗುವುದು. ಬೆಳಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗುವುದರಿಂದ ಬೆಳಗ್ಗೆ 6 ಗಂಟೆಗೆ ಅಣಕು ಮತದಾನ ಮಾಡಲಾಗುವುದು ಎಂದು ಅವರು ಹೇಳಿದರು.

ಈ ಬಾರಿ ಎಲ್ಲ ಮತದಾರರಿಗೆ ಫೆÇೀಟೋವುಳ್ಳ ಚೀಟಿಗಳನ್ನು ಚುನಾವಣಾ ಸಿಬ್ಬಂದಿ ವಿತರಿಸಲಿದ್ದಾರೆ. ಮತಗಟ್ಟೆಯಲ್ಲಿ ವಿವಿ ಪ್ಯಾಟ್‍ಗಳನ್ನು ಅಳವಡಿಸುತ್ತಿರುವುದರಿಂದ ಮತದಾನದ ಟೇಬಲ್‍ಅನ್ನು 30 ಇಂಚು ಎತ್ತರದಲ್ಲಿ ಇಡಲಾಗುವುದು ಎಂದು ತಿಳಿಸಿದರು.

ಎಲ್ಲ ಮತಗಟ್ಟೆಗಳಿಗೆ ವಿವಿ ಪ್ಯಾಟ್ ಮೆಷಿನ್ ಇಡುತ್ತಿರುವುದರಿಂದ ಚುನಾವಣಾ ಸಿಬ್ಬಂದಿ ಹೆಚ್ಚಾಗಿ ಬೇಕಾಗಿದೆ. ಅದಕ್ಕಾಗಿ ಖಾಸಗಿ ಶಾಲೆಗಳ ಸಿಬ್ಬಂದಿಗಳನ್ನು ತೆಗೆದುಕೊಳ್ಳಲು ತೀರ್ಮಾನಿಸಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ಅನುಮತಿಗೆ ಪತ್ರ ಬರೆಯಲಾಗಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ