ಬೆಂಗಳೂರು,ಮಾ.27-ವಿಧಾನಸಭೆ ಚುನಾವಣೆ ದಿನಾಂಕ ನಿಗದಿಯಾದ ಹಿನ್ನೆಲೆಯಲ್ಲಿ ಚುನಾವಣೆ ಸಿದ್ದತೆ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸುವುದಾಗಿ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಜೀವ್ ಕುಮಾರ್ ತಿಳಿಸಿದ್ದಾರೆ.
ಚುನಾವಣೆಗೆ ಕೈಗೊಳ್ಳಬೇಕಾದ ಪೂರ್ವ ಸಿದ್ದತೆಗಳ ಬಗ್ಗೆ ಡಿಸಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಆ ಮೂಲಕ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಮತ್ತಿತರ ವಿಷಯಗಳ ಕುರಿತು ಸಲಹೆಸೂಚನೆಗಳನ್ನು ನೀಡುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಕೇಂದ್ರ ಚುನಾವಣಾ ಆಯೋಗ ವಿಧಾನಸಭೆ ಚುನಾವಣೆ ದಿನಾಂಕವನ್ನು ನಿಗದಿಗೊಳಿಸಿದ ಬೆನ್ನಲ್ಲೆ ರಾಜ್ಯ ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆ ಬಗ್ಗೆ ಸಮಾಲೋಚೆ ನಡೆಸಲಿದೆ.