ಮತದಾರರಲ್ಲಿ ಜನಜಾಗೃತಿ ಮೂಡಿಸಲು ಕನ್ನಡದ ಕಲಿ ರಾಹುಲ್ ದ್ರಾವಿಡ್ ಅವರನ್ನು ವಿಶೇಷ ರಾಯಭಾರಿಯನ್ನಾಗಿ ಕೇಂದ್ರ ಚುನಾವಣಾ ಆಯೋಗ ನೇಮಿಸಿದೆ:

ನವದೆಹಲಿ,ಮಾ.27-ಮತದಾರರಲ್ಲಿ ಜನಜಾಗೃತಿ ಮೂಡಿಸಲು ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ, ಕರ್ನಾಟಕದ ಗೋಡೆ ಎಂದೇ ಖ್ಯಾತಿ ಪಡೆದಿದ್ದ ಕನ್ನಡದ ಕಲಿ ರಾಹುಲ್ ದ್ರಾವಿಡ್ ಅವರನ್ನು ವಿಶೇಷ ರಾಯಭಾರಿಯನ್ನಾಗಿ ಕೇಂದ್ರ ಚುನಾವಣಾ ಆಯೋಗ ನೇಮಿಸಿದೆ.
ಮತದಾನ ನಡೆಯುವವರೆಗೂ ರಾಹುಲ್ ದ್ರಾವಿಡ್ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಪ್ರಮುಖರು ರಾಜ್ಯಾದ್ಯಂತ ಮತದಾರರಲ್ಲಿ ಮತದಾನದ ಹಕ್ಕು ಕುರಿತು ಜಾಗೃತಿ ಮೂಡಿಸಲಿದ್ದಾರೆ.
ನವದೆಹಲಿಯಲ್ಲಿಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಓಂಪ್ರಕಾಶ್ ರಾವತ್ ಇದನ್ನು ಅಧಿಕೃತವಾಗಿ ಬಹಿರಂಗಪಡಿಸಿದರು.
ರಾಹುಲ್ ದ್ರಾವಿಡ್ ಹಾಗೂ ಇತರರನ್ನು ರಾಯಭಾರಿಗಳನ್ನಾಗಿ ನೇಮಕ ಮಾಡಿಕೊಳ್ಳಲಾಗಿದೆ. ಮತದಾರರಲ್ಲಿ ಮತದಾನದ ಬಗ್ಗೆ ಜನಜಾಗೃತಿ ಮೂಡಿಸಿ ಶೇಕಡವಾರು ಮತಪ್ರಮಾಣವನ್ನು ಹೆಚ್ಚಳ ಮಾಡಲು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಹಿಂದಿನ ಚುನಾವಣೆಯಲ್ಲೂ ನಾವು ವಿಶೇಷ ಅಭಿಯಾನಗಳನ್ನು ಹಮ್ಮಿಕೊಂಡ ಪರಿಣಾಮ ಶೇಕಡವಾರು ಮತದಾನದ ಪ್ರಮಾಣ ಏರಿಕೆಯಾಗಿತ್ತು. ಇದು ಇನ್ನಷ್ಟು ಹೆಚ್ಚಳವಾಗಲು ನಾವು ಕ್ರೀಡೆಗಳಲ್ಲಿ ಸಾಧನೆ ಮಾಡಿದವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಿಕೊಳ್ಳುವ ಸಂಪ್ರದಾಯವಿದೆ ಎಂದು ತಿಳಿಸಿದರು.
ಮೂಲಗಳ ಪ್ರಕಾರ ರಾಹುಲ್ ದ್ರಾವಿಡ್ ಜೊತೆ ಕನ್ನಡದ ಬೆಡಗಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಜ್ಞಾನಪೀಠ ಪುರಸ್ಕøತರಾದ ಚಂದ್ರಶೇಖರ್ ಕಂಬಾರ, ಗಿರೀಶ್ ಕಾರ್ನಾಡ್, ಅಶ್ವಿನಿ ಪೆÇನ್ನಪ್ಪ ಸೇರಿದಂತೆ ಹಲವು ದಿಗ್ಗಜರನ್ನು ಬಳಸಿಕೊಳ್ಳಲು ಆಯೋಗ ಸಜ್ಜಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ