
ಮೈಸೂರು, ಮಾ.27- ಮೈಸೂರು ವಿಶ್ವವಿದ್ಯಾನಿಲಯದ ತೋಟಗಾರಿಕೆ ವಿಭಾಗದ ಕೆಲಸಗಾರನೊಬ್ಬ ಕ್ಯಾಂಪಸ್ ಆವರಣದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಪಡುವಾರಹಳ್ಳಿ ವ್ಯಾಪ್ತಿಯ ಮಂಜು (37) ಆತ್ಮಹತ್ಯೆ ಮಾಡಿಕೊಂಡಿರುವ ಕೆಲಸಗಾರ.
ಬೆಳಗ್ಗೆ ಮನೆಯಲ್ಲಿ ಹಸುವಿನ ಹಾಲು ಕರೆದಿಟ್ಟು ಬರುತ್ತೇನೆ ಎಂದು ಹೇಳಿ ಹೋದ ಮಂಜು ವಿವಿ ನಿಲಯದ ಕ್ಯಾಂಪಸ್ನಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೇರೆ ಕಾರ್ಮಿಕರು ಕೆಲಸಕ್ಕೆ ಬಂದಾಗ ಮಂಜು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿ ಪೆÇಲೀಸರಿಗೆ ತಿಳಿಸಿದ್ದಾರೆ.
ಜಯಲಕ್ಷ್ಮಿಪುರಂ ಠಾಣೆ ಪೆÇಲೀಸರು ಶವವನ್ನು ಮೈಸೂರು ಮೆಡಿಕಲ್ ಕಾಲೇಜು ಶವಾಗಾರಕ್ಕೆ ಕಳುಹಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.