ಬೆಂಗಳೂರು:ಮಾ-28: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಇದರ ಬೆನ್ನಲ್ಲೇ ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಚುನಾವಣೆಯ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಅವರು ರಾಹುಲ್ ದ್ರಾವಿಡ್ ಅವರನ್ನು ಚುನಾವಣಾ ರಾಯಭಾರಿಯಾಗಿ ನೇಮಿಸಿರುವುದಾಗಿ ಹೇಳಿದದ್ದಾರೆ.
ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಅವರು ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಭಿತ್ತಿಪತ್ರಗಳು ಸೇರಿದಂತೆ ಮತದಾನ ಜಾಗೃತಿಗಾಗಿ ಸಿದ್ದಪಡಿಸಲಾದ ಪ್ರಚಾರ ಸಾಮಗ್ರಿ ಬಿಡುಗಡೆ ಮಾಡಿದರು. ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರು ಮತದಾನದ ಕುರಿತು ಜಾಗೃತಿ ರಾಯಭಾರಿಯಾಗಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.
ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಸಂಯೋಜನೆಯಲ್ಲಿ ಥೀಮ್ ಸಾಂಗ್ ಸಿದ್ದಪಡಿಸಲಾಗಿದ್ದು ,ಈ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಮೇ. 12ರಂದು ಮತದಾನ ನಡೆಯಲಿದ್ದು, ಮೇ 15ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಏಪ್ರಿಲ್ 17ರದು ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗುತ್ತದೆ. ಏಪ್ರಿಲ್ 24ರಂದು ನಾಮಪತ್ರ ಸಲ್ಲಿಕೆ ಕೊನೆಯ ದಿನವಾಗಿದ್ದು, ಏಪ್ರಿಲ್ 25ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 27ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ತಿಳಿದುಬಂದಿದೆ.ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
Assembly polls,Karnataka, Rahul Dravid,state election icon,Yograj Bhat,Theme song