
ಬೆಂಗಳೂರು: ಹಿರಿಯ ನಟಿ ಜಯಂತಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಅವರನ್ನು ಸೋಮವಾರ ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಂಗಳವಾರ ಸಂಜೆಯ ಹೊತ್ತಿಗೆ ಅವರ ಆರೋಗ್ಯದ ಬಗ್ಗೆ ವದಂತಿಗಳು ಹರಿದಾಡತೊಡಗಿದವು. ಆದರೆ, ಈ ಬಗ್ಗೆ ಜಯಂತಿ ಅವರ ಪುತ್ರ ಕೃಷ್ಣ ಕುಮಾರ್ ಪ್ರತಿಕ್ರಿಯಿಸಿ, ಅಮ್ಮ ಈಗ ಸ್ವಲ್ಪ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಕಾಣಿಸಿಕೊಳ್ಳುತ್ತಿದ ಎಂದಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಅಸ್ತಮಾದಿಂದ ಬಳಲುತ್ತಿದ್ದ ಜಯಂತಿಯವರು ಭಾನುವಾರ ರಾತ್ರಿ ತೀವ್ರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.