ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಸಂಸತ್ತಿನಲ್ಲಿ ವಾಗ್ದಂಡನೆ?

ನವದೆಹಲಿ, ಮಾ.28- ನಾಲ್ವರು ಹಿರಿಯ ನ್ಯಾಯಮೂರ್ತಿಗಳಿಂದ ಗಂಭೀರ ಆರೋಪಗಳಿಗೆ ಗುರಿಯಾಗಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಸಂಸತ್ತಿನಲ್ಲಿ ವಾಗ್ದಂಡನೆ ನಿರ್ಣಯ ಮಂಡಿಸಿ ಅವರನ್ನು ಹುದ್ದೆಯಿಂದ ವಜಾಗೊಳಿಸುವ ಯತ್ನಗಳನ್ನು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ತೀವ್ರಗೊಳಿಸಿವೆ.
ಈ ಸಂಬಂಧ ಕಾಂಗ್ರೆಸ್ ನಾಯಕರಾದ ಗುಲಾಂ ನಬಿ ಅಜಾದ್, ಕಪಿಲ್ ಸಿಬಾಲ್ ಮತ್ತು ಅಹಮದ್ ಪಟೇಲ್ ಸೇರಿದಂತೆ ಈವರೆಗೆ 20 ಮಂದಿ ಅರ್ಜಿಗೆ ಸಹಿ ಮಾಡಿದ್ದಾರೆ ಎಂದು ಎನ್‍ಸಿಪಿ ನಾಯಕ ಮಜೀದ್ ಮೆಮೊನ್ ತಿಳಿಸಿದ್ದಾರೆ.
ಸುಪೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರ ಕಾರ್ಯವೈಖರಿ ಬಗ್ಗೆ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಇತ್ತೀಚಿಗೆ ಬಹಿರಂಗವಾಗಿಯೇ ತಮ್ಮ
ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಸಂಗತಿ ನ್ಯಾಯಾಂಗ ವ್ಯವಸ್ಥೆಯಲ್ಲಿ ತಲ್ಲಣ ಉಂಟು ಮಾಡಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ